ಕೆರೆಯಲ್ಲಿ ಶವವಾಗಿ ಪತ್ತೆಯಾದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ..! ಕಾರಣ ನಿಗೂಢ

0
Spread the love

ರಾಮನಗರ:ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿಯಾಗಿದ್ದು, ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದು,

Advertisement

ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಬಳಿಕ ಸಂಜೆಯ ಹೊತ್ತಿಗೆ ಸಿಂಗರಾಜಿಪುರ ಕೆರೆಯ ದಡದಲ್ಲಿ ವಿದ್ಯಾರ್ಥಿನಿಯ ಐಡಿ ಕಾರ್ಡ್, ಬ್ಯಾಗ್ ಪತ್ತೆಯಾಗಿತ್ತು.

ಈ ಹಿನ್ನೆಲೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ಕೆರೆಯಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here