ತುಮಕೂರು: ಪರಮೇಶ್ವರ್ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಕೇಂದ್ರ ಸಚಿವ ವಿ ಸೋಮಣ್ಣಹೇಳಿದ್ದಾರೆ. ಹೆಗ್ಗೆರೆ ಮೇಲುಸೇತುವೆ ಕಾಮಗಾರಿ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಪರಮೇಶ್ವರ್ ಅದೃಷ್ಟದ ಗೃಹ ಮಂತ್ರಿಯಾಗಿದ್ದಾರೆ.
ಎಲ್ಲೋ ಒಂದು ಕಡೆ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನೋ ಆಸೆ ಇದೆ ಎಂದು ಹೇಳಿದರಲ್ಲದೇ ಇದನ್ನ ನಾನೊಬ್ಬನೇ ಹೇಳುತ್ತಿಲ್ಲ ತುಮಕೂರಿನ ಮಹಾಜನತೆಯ ಅಭಿಪ್ರಾಯ ಎಂದು ಹೇಳಿದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಶಾಸಕ ಸುರೇಶ್ ಗೌಡ, ಡಿಕೆಶಿ ಕೂಡಾ ಇದ್ದಾರೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ ಹಣೆಬರಹ ಯಾರಿಗೆ ಗೊತ್ತು, ಹಣೆ ಬರಹದಂತೆ ಆಗಲಿ ಎಂದರು.
ಬೆಂಗಳೂರು-ತುಮಕೂರು ಮೆಟ್ರೊ ಯೋಜನೆಗೆ ಕಾಂಗ್ರೆಸ್ ನಾಯಕರು ವಿರೋಧ ಮಾಡುತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ ಮಾಡಿದ್ದಾರೆ. ತುಮಕೂರಿನ ಪಂಡಿತನಹಳ್ಳಿಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು, ನಿನ್ನೆ ಒಬ್ಬ ಕಾಂಗ್ರೆಸ್ ನಾಯಕರು ನನ್ನ ಬಳಿ ಬಂದು ತುಮಕೂರು ಮೆಟ್ರೋಗೆ ವಿರೋಧ ವ್ಯಕ್ತಪಡಿಸಿದರು.



