ಉಡುಪಿ: ಪರಶುರಾಮ ಥೀಮ್ ಪಾರ್ಕ್ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ. ರುಣ್ ಕುಮಾರ್ ಅವರು ಪರಶುರಾಮ ಥೀಂ ಪಾರ್ಕ್ ಕಾಮಗಾರಿ ನಿರ್ವಹಿಸಿದ್ದು, ಈ ಕಾಮಗಾರಿಗೆ ಅಂದಾಜು ಮೊತ್ತ 11.05ಕೋಟಿ ರೂ. ಆಡಳಿತ್ಮಾತಕ ಮಂಜೂರಾತಿಗೊಂಡಿದೆ. ಈ ಪೈಕಿ 6.72 ಕೋಟಿ ರೂ. ಅನುದಾನ ಈಗಾಗಲೇ ಬಿಡುಗಡೆಯಾಗಿದೆ.
ಆದರೆ ಕಾಮಗಾರಿ ಪೂರ್ಣಗೊಳಿಸದೇ, ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದೆ, ಉದ್ಘಾಟನಾ ಕಾರ್ಯಕ್ರಮ ಮಾಡಲಾಗಿದೆ. ಈ ಇದರ ಕಾಮಗಾರಿಯ ಗುಣಮಟ್ಟ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಚಾರ ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ. ಆದ್ದರಿಂದ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.



