ಉಡುಪಿ: ದೇಶಾದ್ಯಂತ ಸದ್ದು ಮಾಡಿದ್ದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿದಂತೆ ಪರಶುರಾಮನ ನಕಲಿ ಕಂಚಿನ ವಿಗ್ರಹ ಸ್ಥಾಪಿಸಿದ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ್ʼನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಕೃಷ್ಣ ನಾಯ್ಕ್ ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
Advertisement
ಕ್ರಿಶ್ ಆರ್ಟ್ ವರ್ಲ್ಡ್‌ನ ಕೃಷ್ಣ ನಾಯ್ಕ್‌ಗೆ ಮೂರ್ತಿ ನಿರ್ಮಾಣದ ಹೊಣೆ ಹೊರಿಸಲಾಗಿತ್ತು. ನಕಲಿ ಮೂರ್ತಿ ನಿರ್ಮಾಣ ಆರೋಪದಲ್ಲಿ ನಲ್ಲೂರಿನ ಕೃಷ್ಣ ಶೆಟ್ಟಿ ದೂರಿನ ಅನ್ವಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿತ್ತು. ಜಾಮೀನಿಗಾಗಿ ಕೋರ್ಟ್‌ಗೆ ಶಿಲ್ಪಿ ಕೃಷ್ಣ ನಾಯ್ಕ್ ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.