ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಪ್ರತಿಭೆಗಳನ್ನು ಹೊರಹಾಕಲು ಸಹಕಾರಿಯಾಗುತ್ತದೆ ಎಂದು ಎಂ.ಎಂ. ಮೇಗಲಮನಿ ಹೇಳಿದರು.
Advertisement
ಅವರು ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದ ಕಾರ್ತಿಕ ಶಿಗ್ಗಾವಿ ಅವರನ್ನು ಗೌರವಿಸಿ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿ ಒಂದಲ್ಲಾ ಒಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಹೊರಹಾಕಲು ಸಾಕಷ್ಟು ವೇದಿಕೆಗಳು ಇದ್ದು, ಅವುಗಳ ಸದುಪಯೋಗ ಪಡೆದುಕೊಂಡಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು.
ಶಾಲಾ ಪ್ರಧಾನ ಗುರು ಪಿ.ಬಿ. ಕೆಂಚನಗೌಡರ, ಎಂ.ಎಂ. ಕೊಪ್ಪಳ, ಕೆ.ಎಂ. ಹೆರಕಲ್ಲ, ಎಸ್.ಎಚ್. ಉಪ್ಪಾರ, ಟಿ.ವೀಣಾ, ಎಸ್.ವಿ. ಹಿರೇಮಠ, ವಿ.ಎಂ. ಕಂಠಿ, ನಂದಾ ಮಟ್ಟಿ, ಜ್ಯೋತಿ ಜಾಧಾವ, ಪವಿತ್ರಾ ಮಟ್ಟಿ ಇದ್ದರು.