ನರೇಗಾ ಇ-ಕೆವೈಸಿ ಅಭಿಯಾನದಲ್ಲಿ ಪಾಲ್ಗೊಳ್ಳಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ಗಳನ್ನು ಇ-ಕೆವೈಸಿ ಮೂಲಕ ಇಂಧೀಕರಿಸಲಾಗುತ್ತಿದ್ದು, ಎಲ್ಲ ನರೇಗಾ ಕೂಲಿ ಕಾರ್ಮಿಕರು ಈ ಅಭಿಯಾನದಲ್ಲಿ ಭಾಗವಹಿಸಿ ಕಡ್ಡಾಯವಾಗಿ ತಮ್ಮ ಜಾಬ್ ಕಾರ್ಡ್ಗಳ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಲ್ಲಯ್ಯ ಕೊರವನವರ ಮನವಿ ಮಾಡಿದರು.

Advertisement

ಬುಧವಾರ ತಾಲೂಕಿನ ಬಿಂಕದಕಟ್ಟಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ತರಬೇತಿ ಪಡೆದ ಎಲ್ಲಾ ಸಿಬ್ಬಂದಿಗಳು ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಇ-ಕೆವೈಸಿ ಪ್ರಕ್ರಿಯೆಯಲ್ಲಿ ಕೂಲಿ ಕಾರ್ಮಿಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳದ ಜಾಬ್ ಕಾರ್ಡ್ಗಳು ನಿಷ್ಕ್ರಿಯವಾಗುತ್ತವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯ ಹೆಚ್ಚು ಪಾರದರ್ಶಕ ಅನುಷ್ಠಾನಕ್ಕೆ ಮತ್ತೊಂದು ಹೆಜ್ಜೆ ಇ-ಕೆವೈಸಿ ಆಗಿದ್ದು, ನರೇಗಾ ಕೂಲಿಕಾರರು, ಕಾಯಕ ಬಂಧುಗಳು ತಮ್ಮ ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಎಲ್ಲರೂ ಸಹ ತಪ್ಪದೇ ತಮ್ಮ ಜಾಬ್ ಕಾರ್ಡ್ಗಳ ಇ-ಕೆವೈಸಿ ಅಪ್ಡೇಟ್ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ, ಡಿಇಒ, ಬಿಎಫ್, ಜಿಕೆಎಂ ಸೇರಿದಂತೆ ನರೇಗಾ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಘವೇಂದ್ರ ಹುಲ್ಲೋಜಿ, ವಾಟರ್‌ಮನ್ ಕಾಶೀಂ ದುಂದೂರ, ಬಿಎಫ್‌ಟಿ ದಾವಲಸಾಬ್ ಚಲ್ಲಮರದ, ಭೀಮಶಿ ಆರಟ್ಟಿ ಸೇರಿದ್ದ ಸಿಬ್ಬಂದಿಗಳು ಇದ್ದರು.

ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೋಂದಾಯಿತ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್ ಅನ್ನು ಇ-ಕೆವೈಸಿ ಮೂಲಕ ಮೌಲ್ಯೀಕರಿಸುತ್ತಿದ್ದು, ನರೇಗಾ ಯೋಜನೆಯಡಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್ ಅಭಿಯಾನದ ಮಾದರಿಯಲ್ಲಿ ಅತೀ ತುರ್ತಾಗಿ ಇ-ಕೆವೈಸಿ ಮೂಲಕ ಪೂರ್ಣಗೊಳಿಸಲು ಸಿಬ್ಬಂದಿಗಳಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ ಎಂದು ಮಲ್ಲಯ್ಯ ಕೊರವನವರ ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here