ಮತದಾನ ಹಬ್ಬದಲ್ಲಿ ಭಾಗಿಯಾಗಿ : ಎಸ್.ಕೆ. ಇನಾಮದಾರ

0
sveep
Spread the love

ವಿಜಯಸಾಕ್ಷಿ ಸುದ್ದಿ, ರೋಣ : ಎಲ್ಲಾ ಮತದಾರರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೇ 7ರಂದು ನಡೆಯುವ ಮತದಾನದ ದಿನ ತಪ್ಪದೇ ನಿಮ್ಮ ಹಕ್ಕು ಚಲಾಯಿಸಿ. ಅಲ್ಲದೇ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ದೂರುಗಳನ್ನು ನೀಡಬೇಕು, ಸುಲಲಿತ ಹಾಗೂ ನ್ಯಾಯಬದ್ಧ ಚುನಾವಣೆಗಾಗಿ ಚುನಾವಣಾ ಆಯೋಗ ನೀಡಿರುವ ವೋಟರ್ ಹೆಲ್ಪ್ ಲೈನ್, ಸಕ್ಷಾಮ್ ಆ್ಯಪ್, ಸಿವಿಜಿಲ್ ಆ್ಯಪ್‌ಗಳನ್ನು ಬಳಸಿ ನೈತಿಕ ಮತದಾನಕ್ಕೆ ಸಹಕರಿಸಬೇಕು ಎಂದು ತಾಲೂಕಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ ಕರೆ ನೀಡಿದರು.

Advertisement

ಲೋಕಸಭಾ ಚುನಾವಣೆ 2024ರ ಅಂಗವಾಗಿ ಸೋಮವಾರ ರೋಣ ಪಟ್ಟಣದ ಸಿದ್ಧಾರೂಢ ಮಠದಿಂದ ತಾಲೂಕಾ ಆಸ್ಪತ್ರೆಯವರೆಗೆ ಹಮ್ಮಿಕೊಂಡಿದ್ದ ಬೃಹತ್ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೇ 7ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆ-ದಾಕ್ಷಿಣ್ಯಗಳಿಗೆ ಪ್ರಭಾವಿತರಾಗದೆ ವಿವೇಚನೆಯಿಂದ ಮತ ಚಲಾಯಿಸಿ. ಆ ಮುಖಾಂತರ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಕಡ್ಡಾಯವಾಗಿ ಮತದಾನ ಮಾಡಿ ಎಂದರು.

ಸೂಡಿ ಕ್ರಾಸ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನದ ಜಾಗೃತಿ ಘೋಷಣೆಗಳನ್ನು ಕೂಗುತ್ತಾ ಪೋತರಾಜನ ಕಟ್ಟೆ ಮೂಲಕ ತಾಲೂಕಾ ಆಸ್ಪತ್ರೆಯವರೆಗೂ ಜಾಗೃತಿ ಜಾಥಾ ತಲುಪಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು, ರೋಣ ತಾಲೂಕಿನ 11 ಪ್ರಾಥಮಿಕ ಅರೋಗ್ಯ ಕೇಂದ್ರದ ಸಿಬ್ಬಂದಿಗಳು, ತಾಲೂಕಾ ಪಂಚಾಯತ ಸಿಬ್ಬಂದಿಗಳು ಭಾಗವಹಿಸಿದ್ದರು.

80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮತದಾನ ಜಾಗೃತಿ ಜಾಥಾದಂತಹ ಅನೇಕ ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲರೂ ಕಡ್ಡಾಯವಾಗಿ ನಿರ್ಭೀತಿಯಿಂದ ಮತ ಚಲಾಯಿಸಿ ಎಂದು ಎಸ್.ಕೆ. ಇನಾಮದಾರ ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here