ಮೈಸೂರು: ಪೊಲೀಸ್ ಇಲಾಖೆಗೆ ಪಕ್ಷ ಮುಖ್ಯ ಅಲ್ಲ. ಕಾನೂನು ಕಾಪಾಡುವುದು ಅಷ್ಟೆ ಮುಖ್ಯ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ವ್ಯಕ್ತಿ ತಪ್ಪು ಮಾಡಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಇದ್ದಾರೆ.
ಬೇರೆ ಯಾರಿಗೂ ಅದಕ್ಕೆ ಅವಕಾಶ ಕೊಡಲ್ಲ. ಪೊಲೀಸ್ ಇಲಾಖೆಗೆ ಪಕ್ಷ ಮುಖ್ಯ ಅಲ್ಲ. ಕಾನೂನು ಕಾಪಾಡುವುದು ಅಷ್ಟೆ ಮುಖ್ಯ. ಇಂತಹ ಘಟನೆ ವೇಳೆ ಕೇಳಿ ಬರುವ ಹೇಳಿಕೆ ನಿಲ್ಲಿಸಲು ಸಾಧ್ಯ ವಿಲ್ಲ. ಏಕೆಂದರೆ ಎಲ್ಲರಿಗೂ ವಾಕ್ ಸ್ವಾತಂತ್ರ‍್ಯವಿದೆ.
ರಾಜಕೀಯ ಹೇಳಿಕೆಗಳಿಂದ ಪೊಲೀಸರ ನೈತಿಕತೆ ಕುಗ್ಗಿಸಲು ಸಾಧ್ಯವಿಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಲು ಯಾರ ಕೈಯಲ್ಲೂ ಆಗಲ್ಲ. ಇಂತಹ ದಾಂಧಲೆಗೆ ಯುಪಿ, ಮಧ್ಯ ಪ್ರದೇಶದಲ್ಲಿ ಬುಲ್ಡೋಜರ್ ಹತ್ತಿಸುವ ಕ್ರಮ ಇದೆ. ಕರ್ನಾಟಕದಲ್ಲೂ ಆ ಪರಿ ಸ್ಥಿತಿ ಬಂದರೆ ನೋಡೋಣ… ಈಗ ಅಂತಹ ಪರಿಸ್ಥಿತಿ ಕರ್ನಾಟಕದಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.



