ಬೆಂಗಳೂರು:- ನಗರದ ಪ್ರತಿಷ್ಠಿತ JW ಮಾರಿಯೆಟ್ ಹೋಟೆಲ್ ಮೇಲೆ ಸಿಸಿಬಿ ದಾಳಿ ಮಾಡಿದೆ.
Advertisement
ಅವಧಿ ಮೀರಿ ಹೋಟೆಲ್ನಲ್ಲಿ ಪಾರ್ಟಿ ಮತ್ತು ಡ್ರಗ್ಸ್ ಬಳಕೆ ಆರೋಪ ಕೇಳಿಬಂದ ಹಿನ್ನಲೆ ಸಿಸಿಬಿ ಎಸಿಪಿ ಮಹಾನಂದ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಸುಮಾರು 50ಕ್ಕೂ ಹೆಚ್ಚು ಜನ ಪಾರ್ಟಿ ಮಾಡುತ್ತಿದ್ದ ಬಗ್ಗೆ ನಿಖರ ಮಾಹಿತಿ ಪಡೆದು ಸಿಸಿಬಿ ಪೊಲೀಸರು ತಡರಾತ್ರಿ ಅವಧಿ ಮೀರಿ ಪಾರ್ಟಿ ಮಾಡುತ್ತಿದ್ದಾಗ ದಾಳಿ ಮಾಡಿದ್ದಾರೆ. ಸದ್ಯ ದಾಳಿ ವೇಳೆ ಓರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ್ದಾರೆ.
ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.