ಚಂಡೀಗಢ: ಪಂಜಾಬ್ನಲ್ಲಿ ಎರಡು ಯಾತ್ರಾ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ನಾಲ್ವರು ಯಾತ್ರಿಕರು ಹಾಗೂ ಓರ್ವ ಬೈಕ್ ಸವಾರ ಸೇರಿ ಐವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ತರಣ್ ತರಣ್ ಜಿಲ್ಲೆಯ ನೌಶೆಹ್ರಾ ಪನ್ನುವಾನ್ ಸಮೀಪದ ರಾಷ್ಟ್ರೀಯ ಹೆದ್ದಾರಿ-54ರಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಗೆ ಅಡ್ಡಲಾಗಿ ಬಂದ ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ವೇಳೆ ಒಂದು ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್ಗಳ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಐವರನ್ನು ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಗಾಯಾಳುಗಳಿಗೆ ತರಣ್ ತರಣ್ನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಖ್ಯಮಂತ್ರಿ ತೀರ್ಥಯಾತ್ರೆ ಯೋಜನೆಯಡಿ ಸಂಚರಿಸುತ್ತಿದ್ದ ಒಂದು ಬಸ್ ಫರೀದ್ಕೋಟ್ನಿಂದ ಅಮೃತಸರಕ್ಕೆ ತೆರಳುತ್ತಿತ್ತು. ಮತ್ತೊಂದು ಬಸ್ ಅಮೃತಸರದಿಂದ ಮುಕ್ತ್ಸರ್ಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಎರಡೂ ಬಸ್ಗಳು ಡಿಕ್ಕಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.









