BMTC ಕಂಡಕ್ಟರ್ʼಗೆ ಚಾಕುವಿನಿಂದ ಇರಿದ ಪ್ರಯಾಣಿಕ! ಕಾರಣವೇನು ಗೊತ್ತಾ..?

0
Spread the love

ಬೆಂಗಳೂರು: ಬಿಎಂಟಿಸಿ ಕಂಡಕ್ಟರ್ ಗೆ ಯಾಣಿಕನೊಬ್ಬ ಚಾಕು ಇರಿದಿರುವ ಘಟನೆ ಬೆಂಗಳೂರಿನ  ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ ನಡೆದಿದೆ. ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಗೆ ಹರಿಸಿಂಹ ಎಂಬ ಯುವಕ ಚಾಕು ಇರಿದಿದ್ದಾನೆ. ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.

Advertisement

ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

 


Spread the love

LEAVE A REPLY

Please enter your comment!
Please enter your name here