HomeGadag Newsಎಸ್‌ಪಿ ಬಿ.ಎಸ್. ನೇಮಗೌಡರಿಂದ ಪ್ರಮುಖ ವೃತ್ತಗಳ ಪರಿಶೀಲನೆ

ಎಸ್‌ಪಿ ಬಿ.ಎಸ್. ನೇಮಗೌಡರಿಂದ ಪ್ರಮುಖ ವೃತ್ತಗಳ ಪರಿಶೀಲನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರು ಪ್ರಮುಖ ವೃತ್ತಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಳೆ ನೀರಿನ ಸರಾಗ ಹರಿಯುವಿಕೆ, ತಗ್ಗು ಗುಂಡಿಗಳ ಮುಚ್ಚುವಿಕೆ, ಉತ್ತಮ ಪಾರ್ಕಿಂಗ್ ವ್ಯವಸ್ಥೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಅಡೆ-ತಡೆಗಳನ್ನು ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಬೇಕೆಂದು ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು.

Patrolling in view of maintenance of law and order

ಸ್ಥಳದಲ್ಲಿದ್ದ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಅವರು, ಸಾರ್ವಜನಿಕರಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಲ್ಪಿಸಲು ಮತ್ತು ನಗರದ ಸಂಚಾರ ವ್ಯವಸ್ಥೆ ಪರಿಣಾಮಕಾರಿ ಹಾಗೂ ಕಾನೂನು ಸುವ್ಯವಸ್ಥೆ ನಿರ್ವಹಣೆಯ ದೃಷ್ಟಿಯಿಂದ ರಾತ್ರಿ ಮತ್ತು ಹಗಲು ಪೆಟ್ರೋಲಿಂಗ್ ನಡೆಸಲಾಗುತ್ತಿದೆ. ಅದೇ ರೀತಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯವಾಗಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಿದರು.

Patrolling in view of maintenance of law and order

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಮ್.ಜಿ. ಸಂಕದ, ಡಿಎಸ್‌ಪಿ, ಸಿಪಿಐ, ಪಿಐ ಸೇರಿದಂತೆ ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!