ವಿರೋಧದ ನಡುವೆಯೂ ‘ಕಾಂತಾರ’ ಸಿನಿಮಾದ ಪರ ನಿಂತ ಪವನ್ ಕಲ್ಯಾಣ್

0
Spread the love

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು ಸಿನಿಮಾ ನೋಡಲು ಪ್ರತಿಯೊಬ್ಬರು ತುದಿಗಾಲಲ್ಲಿ ನಿಂತಿದ್ದಾರೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ, ವಿದೇಶದಲ್ಲೂ ಕಾಂತಾರ ಸಿನಿಮಾ ಬಿಡುಗಡೆಗೆ ಎದುರು ನೋಡ್ತಿದ್ದಾರೆ. ಈ ಮಧ್ಯೆ ಇತ್ತೀಚೆಗಷ್ಟೆ ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರ ಜಾರಿ ಸರ್ಕಾರ ಆದೇಶ ಹೊರಡಿಸಿತ್ತು, ಆದರೆ ‘ಕಾಂತಾರ: ಚಾಪ್ಟರ್ 1’ ನಿರ್ಮಿಸಿರುವ ಹೊಂಬಾಳೆ ಫಿಲಮ್ಸ್​​, ನ್ಯಾಯಾಲಯಕ್ಕೆ ಹೋಗಿ ಆದೇಶಕ್ಕೆ ತಡೆ ತಂದಿದ್ದು, ರಾಜ್ಯದಲ್ಲಿ ಹೆಚ್ಚುವರಿ ಮೊತ್ತಕ್ಕೆ ಟಿಕೆಟ್ ಮಾರಾಟ ಮಾಡಲು ಸಜ್ಜಾಗಿದೆ. ಈ ಬೆನ್ನಲ್ಲೆ ಈಗ ನೆರೆಯ ಆಂಧ್ರ ಪ್ರದೇಶದಲ್ಲೂ ಸಹ ಸಿನಿಮಾದ ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ಸಿಕ್ಕಿದೆ.

Advertisement

ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಿನಿಮಾಗಳ ಟಿಕೆಟ್ ದರ ಹೆಚ್ಚು ಮಾಡಬೇಕೆಂದರೆ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ. ಅಂತೆಯೇ ‘ಕಾಂತಾರ: ಚಾಪ್ಟರ್ 1’ ನಿರ್ಮಾಪಕರು ಸರ್ಕಾರಕ್ಕೆ ಮನವಿ ಸಲ್ಲಿಸಿ ಟಿಕೆಟ್ ದರವನ್ನು ಹೆಚ್ಚಿಸಿಕೊಂಡಿದ್ದಾರೆ. ಇದೀಗ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೇ ‘ಕಾಂತಾರ’ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪವನ್ ಕಲ್ಯಾಣ್, ‘ಸಿನಿಮಾಗಳು ಜೋಡಿಸುವ ಕಾರ್ಯವನ್ನು ಮಾಡಬೇಕು, ಮುರಿಯುವ ಕಾರ್ಯವನ್ನು ಮಾಡಬಾರದು. ಕರ್ನಾಟಕದ ಸಿನಿಮಾಗಳು, ಕಲಾವಿದರನ್ನು ನಾವು ದಶಕಗಳಿಂದಲೂ ಸ್ವಾಗತಿಸಿದ್ದೇವೆ. ಡಾ ರಾಜ್​​ಕುಮಾರ್, ಶಿವರಾಜ್ ಕುಮಾರ್, ಉಪೇಂದ್ರ, ಸುದೀಪ್ ಈಗ ರಿಷಬ್ ಶೆಟ್ಟಿ. ಇನ್ನು ತೆಲುಗು ಸಿನಿಮಾಗಳಿಗೆ ಅಲ್ಲಿ ಸಮಸ್ಯೆ ಆಗಿದೆ ಎಂಬ ವಿಚಾರವನ್ನೂ ಎರಡೂ ಚಿತ್ರರಂಗದವರು ಒಟ್ಟಾಗಿ ಕೂತು ಬಗೆಹರಿಸಿಕೊಳ್ಳುವ ವಿಷಯ’ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here