ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸದೃಢವಾಗಲು ಕರ ವಸೂಲಾತಿ ಅವಶ್ಯಕವಾಗಿದ್ದು, ಪ್ರತಿಯೊಬ್ಬರೂ ಕರ ಪಾವತಿಸಿ ಎಂದು ಪಿಡಿಓ ಬಿ.ಎನ್. ಬಚೇನಹಳ್ಳಿ ಹೇಳಿದರು.
Advertisement
ಅವರು ನಾಗಾವಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ತೆರಿಗೆ ವಸೂಲಾತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮಗಳು ಇಂದು ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ಅದಕ್ಕೆ ಪೂರಕವಾಗಿ ಆರ್ಥಿಕವಾಗಿ ಸದೃಢವಾಗಲು ಮನೆ ಕರ, ನೀರಿನ ಕರವನ್ನು ಪ್ರತಿಯೊಬ್ಬರೂ ತುಂಬಬೇಕು. ಇದರಿಂದ ಗ್ರಾಮ ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ ಎಂದರು.
ಗಣೇಶ ಪೂಜಾರ, ಎಸ್.ಬಿ. ಛಲವಾದಿ, ಎಸ್.ಬಿ. ಪಾಟೀಲ್, ವಿ.ಎಲ್. ಕೆಂಚಣ್ಣನವರ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಇದ್ದರು.