ಮತದಾನದೊಂದಿಗೆ ದೇಶದ ಋಣ ತೀರಿಸಿ : ಕೃಷ್ಣಪ್ಪ ಧರ್ಮರ

0
matadana
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸಂವಿಧಾನವು ಎಲ್ಲರಿಗೂ ಸಮಾನ ಮತದಾನ ಮೌಲ್ಯ ನೀಡಿದೆ.

Advertisement

ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಹೇಳಿದರು.

ನಗರದ ಚನ್ನಮ್ಮ ಶೈಕ್ಷಣಿಕ ಮತ್ತು ವಿವಿಧೋದ್ದೇಶ ಸಮಿತಿ ಪದವಿ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

18 ವರ್ಷ ತುಂಬಿದ ಎಲ್ಲ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ದೇಶದ ಋಣ ತೀರಿಸಬೇಕು. ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟçವನ್ನು ನಿರ್ಮಿಸಬೇಕು. ಸುತ್ತ-ಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕು. ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಿದಾಗ ಮಾತ್ರ ನಮ್ಮ ಪ್ರಜಾಪ್ರಭುತ್ವವು ಯಶಸ್ವಿಯಾಗುತ್ತದೆ ಎಂದು ಸಲಹೆ ನೀಡಿದರು.

ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು. ಮೇ 7ರಂದು ಮತದಾನ ನಡೆಯಲಿದ್ದು, ಎಲ್ಲ ಕೆಲಸ-ಕಾರ್ಯಗಳನ್ನು ಬದಿಗೊತ್ತಿ ಮತದಾನದಲ್ಲಿ ಪಾಲ್ಗೊಳ್ಳಿ. ಯಾವುದೇ ಆಮಿಷಗಳಿಗೆ ಮರುಳಾಗಬೇಡಿ. ಯುವಜನರು ತಾವಷ್ಟೇ ಮತದಾನ ಮಾಡುವುದಲ್ಲದೆ, ತಮ್ಮ ಮನೆಯ ಸದಸ್ಯರು, ನೆರೆ-ಹೊರೆಯವರಿಗೂ ಮತದಾನ ಮಾಡುವುದರ ಬಗ್ಗೆ ಮನವರಿಕೆ ಮಾಡಿಕೊಡುವಂತೆ ತಿಳಿ ಹೇಳಿದರು.

ಶಾಲಾ ಮೈದಾನದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನದ ದಿನಾಂಕ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಚೆನ್ನಮ್ಮ ಶೈಕ್ಷಣಿಕ ಮತ್ತು ವಿವಿಧೋದ್ದೇಶ ಸಮಿತಿ ಪದವಿ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯರು, ಉಪನ್ಯಾಸಕರು, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ತಾಲೂಕು ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಮೊಳಗಿದ ಘೋಷಣೆಗಳು

ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ, ಸದೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ, ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಕ್ಷಮ್ಯ ಅಪರಾಧ, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ, ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ, ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತಪಡಿಸಿಕೊಂಡು ಮತದಾನ ಮಾಡಿ ಎಂಬ ಘೋಷ ವಾಕ್ಯಗಳನ್ನು ವಿದ್ಯಾರ್ಥಿಗಳು ಮೊಳಗಿಸಿದರು.


Spread the love

LEAVE A REPLY

Please enter your comment!
Please enter your name here