ಧಾರವಾಡ: ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಪಂಚಾಯತ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಆರ್‌ಟಿಐ ಕಾರ್ಯಕರ್ತನ ಕಿರುಕುಳದಿಂದ ಪಿಡಿಓ ನಾಗರಾಜ್ ಅವರು ತೀವ್ರ ಮನನೊಂದು ಇಲಿ ಔಷಧ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಆರೋಪಿ ಬಂಧಿಸಿ ಎಂದು ಆಗ್ರಹಿಸಿದರು.



