HomeDharwadಭಾವೈಕ್ಯದ ಬದುಕಿನಿಂದ ಮನುಕುಲಕ್ಕೆ ನೆಮ್ಮದಿ

ಭಾವೈಕ್ಯದ ಬದುಕಿನಿಂದ ಮನುಕುಲಕ್ಕೆ ನೆಮ್ಮದಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಎಲ್ಲಾ ವೈರುಧ್ಯಗಳನ್ನು ಮರೆತು ಕೂಡಿ ಬಾಳಲು ಪ್ರಯತ್ನಿಸಬೇಕೆಂದು ಭಾರತೀಯ ಸಕಲ ಧರ್ಮ ಸಿದ್ಧಾಂತಗಳು ಬಯಸುತ್ತವೆ. ಆಗ ಅಂಕುರಿಸುವ ಭಾವೈಕ್ಯದ ಬದುಕಿನಿಂದ ಮನುಕುಲಕ್ಕೆ ನೆಮ್ಮದಿ ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ನುಡಿದರು.

ಅವರು ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಜನಜಾಗೃತಿ ಧರ್ಮ ಚಿಂತನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಧರ್ಮ ಮತ್ತು ಸಮಾಜ ಛಿದ್ರವಾಗಲು ಯಾರೂ ಅವಕಾಶ ಕೊಡಬಾರದು. ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸಿದ ವೀರಶೈವ ಧರ್ಮದ ವಿಶಾಲ ವಿಚಾರಗಳನ್ನು ಅರ್ಥ ಮಾಡಿಕೊಂಡಾಗ ಎಲ್ಲಿಯೂ ದ್ವಂದ್ವಗಳು ಹುಟ್ಟಿಕೊಳ್ಳುವದಿಲ್ಲ. ರಂಭಾಪುರಿ ಪೀಠದ ಶಾಖಾಮಠವಾಗಿರುವ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಪ್ರಾಚೀನತೆ ಬಸವ ಪೂರ್ವ ಯುಗಕ್ಕೆ ಸೇರಿದ್ದಾಗಿದೆ. ಈ ನಿಟ್ಟಿನಲ್ಲಿ ವೀರಶೈವ ಧರ್ಮದ ಚಾರಿತ್ರಿಕ ಘನತೆ ಎದ್ದು ಕಾಣುತ್ತದೆ. ಇಂತಹ ಎಲ್ಲ ಸಪ್ರಮಾಣ ಸಂಗತಿಗಳನ್ನು ಮರೆಮಾಚಲು ನಡೆದಿರುವ ವ್ಯವಸ್ಥಿತ ಪ್ರಯತ್ನಗಳ ವಿಚಾರಗಳನ್ನು ಯಾರೂ ಸ್ವೀಕರಿಸಬಾರದು ಎಂದು ರಂಭಾಪುರಿ ಜಗದ್ಗುರುಗಳು ಸ್ಪಷ್ಟಪಡಿಸಿದರು.

ನೊಣವಿನಕೆರೆ ಸೋಮೇಕಟ್ಟೆ ಕಾಡಸಿದ್ಧೇಶ್ವರಮಠದ ಶ್ರೀಅಭಿನವ ಕಾಡಸಿದ್ಧೇಶ್ವರ ಸ್ವಾಮೀಜಿ, ಮಹಾರಾಷ್ಟç ನಾಗಣಸೂರ ವಿರಕ್ತಮಠದ ಡಾ. ಅಭಿನವ ಬಸವಲಿಂಗ ಸ್ವಾಮೀಜಿ, ಕಲಬುರ್ಗಿ ಬೆಳಗುಂಪಾ ಬೃಹನ್ಮಠದ ಅಭಿನವ ಪರ್ವತೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬ್ಯಾಹಟ್ಟಿ ಹಿರೇಮಠದ ಡಾ. ಸತೀಶ ಗುರೂಜಿ, ಗುರುಮೂರ್ತಿ ಯರಗಂಬಳಿಮಠ ಮಾತನಾಡಿದರು.

ಅಮ್ಮಿನಬಾವಿ ಪಂಚಗೃಹ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹೆಗಡಳ್ಳಿ ಹಿರೇಮಠದ ಷಡ್ಭಾವ ರಹಿತೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಲಘಟಗಿ ಹನ್ನೆರಡುಮಠದ ಅಭಿನವ ಮಡಿವಾಳ ಶಿವಾಚಾರ್ಯ ಸ್ವಾಮೀಜಿ, ಮೊರಬ ಜಡಿಮಠದ ಅಭಿನವ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಹುಣಸಿಕಟ್ಟಿ ಹಿರೇಮಠದ ಬಸವರಾಜ ದೇವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಧಾಮುಲ್ ನಿರ್ದೇಶಕಿ ಶಿವಲೀಲಾ ವಿನಯ ಕುಲಕರ್ಣಿ, ಕಾಂಗ್ರೆಸ್ ಮುಖಂಡರುಗಳಾದ ಈಶ್ವರ ಶಿವಳ್ಳಿ, ಅರವಿಂದ ಏಗನಗೌಡರ, ಸಾಮಾಜಿಕ ಕಾರ್ಯಕರ್ತ ಮಂಜುನಾಥ ಮಕ್ಕಳಗೇರಿ, ಅಮ್ಮಿನಬಾವಿ ಗ್ರಾ.ಪಂ ಅಧ್ಯಕ್ಷೆ ನೀಲವ್ವ ತಿದಿ, ಸದಸ್ಯೆ ಪದ್ಮಾವತಿ ದೇಸಾಯಿ, ಕಾಮಣಿ ವೈದ್ಯ ಡಾ. ನಿತಿನ್‌ಚಂದ್ರ ಹತ್ತಿಕಾಳ, ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಗಯ್ಯ ಹಿರೇಮಠ, ವಕೀಲ ಶಕ್ತಿ ಹಿರೇಮಠ, ಶಿಕ್ಷಕ ಟಿ.ಎಂ. ದೇಸಾಯಿ, ಶಶಿಧರಶಾಸ್ತ್ರೀ ಹಿರೇಮಠ ಡೋಣಿ, ವೀರೇಶಕುಮಾರ ಮಳಲಿ, ಸಿದ್ಧರಾಮ ಬ್ಯಾಕೋಡ ಸಿಂದಗಿ ಅವರನ್ನು ಗೌರವಿಸಲಾಯಿತು.

ಬಿ.ಸಿ. ಕೊಳ್ಳಿ ಸ್ವಾಗತಿಸಿದರು. ಸಿಂಚನಾ ಶಂಕರ ಯಡಳ್ಳಿ ಭರತನಾಟ್ಯ ಪ್ರದರ್ಶನ ನೀಡಿದರು.

ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ತಮ್ಮ ಎಲ್ಲಾ ಕಾರ್ಯಗಳ ಯಶಸ್ಸಿಗೆ ಅಮ್ಮಿನಬಾವಿ, ಮರೇವಾಡ, ಕರಡಿಗುಡ್ಡ, ತಿಮ್ಮಾಪೂರ, ಕೌಲಗೇರಿ ಗ್ರಾಮಗಳ ಸಕಲ ಸದ್ಭಕ್ತರ ಸಹಕಾರ ಮತ್ತು ರಂಭಾಪುರಿ ಜಗದ್ಗುರುಗಳ ಆಶೀರ್ವಾದವೇ ಕಾರಣವಾಗಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!