HomeKarnataka Newsವಿಜಯಪುರದಲ್ಲಿ ತಡರಾತ್ರಿ ಬೆಚ್ಚಿಬಿದ್ದ ಜನ: ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪನ!

ವಿಜಯಪುರದಲ್ಲಿ ತಡರಾತ್ರಿ ಬೆಚ್ಚಿಬಿದ್ದ ಜನ: ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪನ!

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕು ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ತಡರಾತ್ರಿ ಭೂಕಂಪನ (Earthquake) ಸಂಭವಿಸಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಮಾಹಿತಿ ನೀಡಿದೆ.

ತಡರಾತ್ರಿ ಸುಮಾರು 2:04 ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳ ಜನರು ತಡರಾತ್ರಿ ಶಬ್ದ ಹಾಗೂ ಕಂಪನವಾಗುತ್ತಿದ್ದಂತೆಯೇ ಆತಂಕಕ್ಕೊಳಗಾಗಿದ್ದಾರೆ.

ಕಂಪನದ ತೀವ್ರತೆ ಸಾಧಾರಣ ಮಟ್ಟದಲ್ಲಿದ್ದ ಕಾರಣ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಲಿ ಅಥವಾ ಆಸ್ತಿಪಾಸ್ತಿ ಹಾನಿಯಾಗಲಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಸೂಚನೆ ನೀಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img