ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿಯಾದ್ರೆ ಸಾಮಾನ್ಯ ಜನರೂ ಸಿದ್ದರಾಮಯ್ಯಗೆ ಶಾಪ ಹಾಕ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಸ್ತುತ ತಂದಿರುವ ಜಾತಿ ಜನಗಣತಿ ವರದಿಯನ್ನು ಸಿದ್ದರಾಮಯ್ಯ ಅವರು ತಿರಸ್ಕರಿಸಬೇಕು. ಮತ್ತೊಂದು ಸಮೀಕ್ಷೆಯನ್ನು ಮಾಡಿ, ಇನ್ನೂ ಮೂರು ವರ್ಷ ಸಮಯ ಇದೆ ಸಿದ್ದರಾಮಯ್ಯಗೆ. ಈ ಸಮೀಕ್ಷೆ ವೈಜ್ಞಾನಿಕವಾಗಿ ಮಾಡಿಲ್ಲ, ವರದಿ ಪಾರದರ್ಶಕ ಆಗಿಲ್ಲ.
ಇದೊಂದು ಜೇನುಗೂಡಿಗೆ ಕೈ ಹಾಕಿದಂತೆ, ನಿಮ್ಮ ಪಕ್ಷದವರೇ ಏನೇನೋ ಹಿಡಿದು ತಿವೀತಿದ್ದಾರೆ. ಈ ವರದಿ ಜಾರಿ ಆದ್ರೆ ಸಾಮಾನ್ಯ ಜನರೂ ಸಿದ್ದರಾಮಯ್ಯಗೆ ಶಾಪ ಹಾಕ್ತಾರೆ. ವರದಿ ಜಾರಿಯಾದರೆ ಸಿದ್ದರಾಮಯ್ಯ ಒಂಟಿಯಾಗಿ ಹೋಗ್ತಾರೆ. ಆದ್ದರಿಂದ ಈ ವರದಿ ತಿರಸ್ಕರಿಸುವಂತೆ ವಿ. ಸೋಮಣ್ಣ ಮನವಿ ಮಾಡಿದ್ದಾರೆ.
ಜಾತಿ ಜನಗಣತಿ ವರದಿ ಸರಿಯಿಲ್ಲ ಅಂತ ಕಾಂಗ್ರೆಸ್‌ನ 50%-60% ನಾಯಕರು ಹೇಳ್ತಿದ್ದಾರೆ. ಹಲವು ಕಡೆ ಸಮೀಕ್ಷೆ ಮಾಡಿಲ್ಲ, ವರದಿಯಲ್ಲಿ ಮಕ್ಕಿ ಕಾ ಮಕ್ಕಿ ಆಗಿದೆ. ಹೊರೆಯಾದರೂ ಪರವಾಗಿಲ್ಲ ಮತ್ತೊಂದು ಸಮಿತಿ ಮಾಡಿ, ಒಂದು ವರ್ಷದಲ್ಲಿ ಹೊಸ ಸಮೀಕ್ಷೆ ಮಾಡಿಸಿ. ಈಗಿನ ವರದಿ ಜಾರಿಯಾದರೆ ರಾಜ್ಯದಲ್ಲಿ ಕೋಮುದಳ್ಳುರಿ ಆಗುತ್ತೆ, ಅದಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಆಗ್ತಾರೆ. ಹೈಕಮಾಂಡ್ ನವ್ರು ಹೇಳಿದ್ರು ಅಂತ ಈ ವರದಿಯ ಜಾರಿ ಮಾಡಿದ್ರೆ ಅದೇ ಸಿದ್ದರಾಮಯ್ಯಗೆ ಮರಣ ಶಾಸಕ ಆಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.