HomeGadag Newsಕೇಂದ್ರ ಸರ್ಕಾರದಿಂದ ಜನಪರ ಯೋಜನೆಗಳು

ಕೇಂದ್ರ ಸರ್ಕಾರದಿಂದ ಜನಪರ ಯೋಜನೆಗಳು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಶನಿವಾರ ಶಿರಹಟ್ಟಿ ಬಿಜೆಪಿ ಮಂಡಳ ಲಕ್ಷ್ಮೇಶ್ವರ ನಗರ ಘಟಕ ಹಾಗೂ ಯುವ ಮೋರ್ಚಾ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿಯೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಏಕೈಕ ರಾಷ್ಟ್ರೀಯ ಪಕ್ಷ ಬಿಜೆಪಿ ಆಗಿದ್ದು, ಕೊಟ್ಯಾಂತರ ಕಾರ್ಯಕರ್ತರ ಪಡೆಯನ್ನು ಪಕ್ಷ ಹೊಂದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿನ 3.0 ಸರಕಾರ ಈಗಾಗಲೇ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಕೃಷಿ, ಕೈಗಾರಿಕೆ, ವಾಣಿಜ್ಯ, ಸಾರಿಗೆ ಸಂಪರ್ಕ, ವಿಮಾನಯಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಕಾಣುತ್ತಿದೆ. ಭಾರತ ವಿಶ್ವಗುರು ಆಗುತ್ತಿದ್ದು, ಇನ್ನೂ ಕೆಲ ವರ್ಷಗಳಲ್ಲಿ ಅತ್ಯಂತ ಪ್ರಬಲ ರಾಷ್ಟ್ರವಾಗಿ ಪ್ರಗತಿ ಹೊಂದಲಿದೆ. ರಾಷ್ಟ್ರ ನಿರ್ಮಾಣಕ್ಕೆ ಬಿಜೆಪಿ ಪಕ್ಷದ ಸದಸ್ಯತ್ವ ಪಡೆಯಬೇಕು. ಯುವ ಸಮೂಹವನ್ನು ಬಿಜೆಪಿಯತ್ತ ಸೆಳೆಯಲು ಕಾರ್ಯರ್ತರು ಪ್ರಾಮಾಣಿಕ ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ಪುರಸಭೆ ಸದಸ್ಯೆ ಅಶ್ವಿನಿ ಅಂಕಲಕೋಟಿ, ಜಿಲ್ಲಾ ಪ್ರ. ಕಾರ್ಯದರ್ಶಿ ಫಕ್ಕೀರೇಶ ರಟ್ಟೀಹಳ್ಳಿ, ಶಿರಹಟ್ಟಿ ಮಂಡಳ ಪ್ರ. ಕಾರ್ಯದರ್ಶಿ ಅನಿಲ ಮುಳಗುಂದ, ನಗರ ಅಧ್ಯಕ್ಷ ನವೀನ ಬೆಳ್ಳಟ್ಟಿ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಚಕ್ರಸಾಲಿ, ವಿಠ್ಠಲ ಬದಿ ಸ್ಭೆರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಇದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img