ಕಲಬುರಗಿ:- ಯುವಕನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಯುವತಿ ಮೃತದೇಹ ಕೊನೆಗೂ ಪತ್ತೆಯಾಗಿದೆ.
Advertisement
ಕಳೆದ ಸೋಮವಾರ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಕುರಿಕೋಟ ಹೊಸ ಸೇತುವೆ ಮೇಲಿಂದ ಬೆಣ್ಣೆತೋರ ಹಿನ್ನೀರಿಗೆ ಜಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಯುವತಿಯ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆ ಬಳಿಕ ಕೊನೆಗೂ ಭುಸಣಗಿ ಗ್ರಾಮದ ಯುವತಿ ಸಾಕ್ಷಿ (22) ಮೃತದೇಹ ಪತ್ತೆಯಾಗಿದೆ.
ಅಭಿಷೇಕ ಎಂಬಾತನ ಕಿರುಕುಳಕ್ಕೆ ಬೇಸತ್ತು ಬೆಣ್ಣೆತೋರ ಹಿನ್ನೀರಿಗೆ ಬಿದ್ದು ಸಾಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅಗ್ನಿಶಾಮಕ ಸಿಬ್ಬಂದಿ ಕಾರ್ಯಚರಣೆಯಿಂದ ಯುವತಿಯ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.