ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿಯ ಆದರ್ಶ ಶಿಕ್ಷಣ ಸಮಿತಿಯ ಎಎಸ್ಎಸ್ ವಾಣಿಜ್ಯ ಮಹಾವಿದ್ಯಾಲಯ 2025-26ನೇ ಶೈಕ್ಷಣಿಕ ವರ್ಷದ ಬಿ.ಕಾಂ 6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೇ.84.13ರಷ್ಟು ಉತ್ತೀರ್ಣತೆ ಸಾಧಿಸಿ ಗಮನಾರ್ಹ ಫಲಿತಾಂಶ ದಾಖಲಿಸಿದೆ.
ಒಟ್ಟು ಫಲಿತಾಂಶದಲ್ಲಿ 73 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 18 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 15 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಪರೀಕ್ಷೆಯಲ್ಲಿ ಸೌಮ್ಯ ಮಿಸ್ಕಿನ್ ಹಾಗೂ ವರ್ಷಾ ಕುಂಬಾರ ತಲಾ ಶೇ.97.71 ಅಂಕ ಗಳಿಸಿ ಕಾಲೇಜಿಗೆ ಜಂಟಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿನುತಾ ರಾಯಬಾಗಿ ಶೇ.96.29 ಅಂಕ ಗಳಿಸಿ ದ್ವಿತೀಯ ಸ್ಥಾನ ಹಾಗೂ ರೇಣುಕಾ ಕಾಮೋಜಿ ಶೇ.95.86 ಅಂಕ ಗಳಿಸಿ ತೃತೀಯ ಸ್ಥಾನ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ಉನ್ನತ ಶಿಕ್ಷಣ ಮತ್ತು ವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.



