ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ಜರುಗಿದ ಸಿಇಟಿ ಪರೀಕ್ಷೆಯಲ್ಲಿ ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿ ಮಜೀನ್ ಮನಿಯಾರ್ ಇಂಜಿನಿಯರಿಂಗ್ ವಿಭಾಗದಲ್ಲಿ 702ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾನೆ.
ರೋಹಿಣಿ ಕರಿಯಲ್ಲಪ್ಪನವರ ಬಿ.ಎಸ್ಸಿ (ಅಗ್ರಿ)ಯಲ್ಲಿ 604ನೇ ರ‍್ಯಾಂಕ್, ಪ್ರಿಯಾಂಕಾ ಪಾಪ್ಪಳೆಯು ಇಂಜಿನಿಯರಿಂಗ್ ವಿಭಾಗದಲ್ಲಿ, ಲಕ್ಷ್ಮಿನರಸಿಂಹ ಇಂಜಿನಿಯರಿಂಗ್ ನಲ್ಲಿ, ಲಿಪಿ ನಾಲ್ವತ್ವಾಡಮಠ ಇಂಜಿನಿಯರಿಂಗ್ ವಿಭಾಗದಲ್ಲಿ, ವಿನಯ್ ಹೊಸೊರ, ಅರ್ಸಲನ್ ಖಾನ್ ನಗಾಡ ರ‍್ಯಾಂಕ್ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಬೆಂಬಲವಾಗಿ ನಿಂತ ಎಲ್ಲ ಉಪನ್ಯಾಸಕರಿಗೆ ಹಾಗೂ ಸಾಧಕರಿಗೆ ಸ್ಟುಡೆಂಟ್ ಎಜುಕೇಶನ್ ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಪ್ರಾಚಾರ್ಯ ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ ಹಾಗೂ ಪದಾಧಿಕಾರಿಗಳಾದ ಪ್ರೊ. ರೋಹಿತ ಒಡೆಯರ್, ಪ್ರೊ. ರಾಹುಲ ಒಡೆಯರ್, ಪ್ರೊ. ಸೈಯದ ಮತಿನ್ ಮುಲ್ಲಾ, ಪ್ರೊ. ಪುನೀತ ದೇಶಪಾಂಡೆ ಹಾಗೂ ಕಾಲೇಜಿನ ಸಮಸ್ತ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.