ಡಿಸೆಂಬರ್ ವೇಳೆಗೆ ಈ 4 ತಾಲೂಕುಗಳಿಗೆ ಶಾಶ್ವತ ಕುಡಿಯುವ ನೀರು: DCM ಡಿಕೆಶಿ ಕೊಟ್ರೂ ಗುಡ್ ನ್ಯೂಸ್!

0
Spread the love

ಬೆಂಗಳೂರು:- ಈ ವರ್ಷಾಂತ್ಯದೊಳಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ,‌ ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರು, ಈ ಭಾಗದ ಜನರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

Advertisement

ಇಂದು ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಯ ಆರಂಭಿಕ ಘಟ್ಟದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿದರು. ಬಳಿಕ ಮಾತನಾಡಿದ ಅವರು, ಈ ವರ್ಷದ ಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ,‌ ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಪೂರ್ಣಗೊಳಿಸಲಾಗುವುದು.

540 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ರಾಮನಗರ ಜಿಲ್ಲೆಗೆ ಕುಡಿಯುವ ನೀರು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. ಈ ಮಾತಿಗೆ ನಾವು ಬದ್ಧರಾಗಿದ್ದೇವೆ. ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಚಾಲನೆ ನೀಡಲಾಯಿತು. ಆದರೂ ಏಕೆ ವಿಳಂಬವಾಗುತ್ತಿದೆ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಅತ್ಯಂತ ಕಡಿಮೆ ಮೊತ್ತದಲ್ಲಿ 3.30 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದರು.

ಏಕೆ ಕೆಲಸ ವಿಳಂಬವಾಗುತ್ತಿದೆ ಏನಾದರೂ ಅಡೆತಡೆಗಳಿವೆಯೇ ಎಂದು ಅಧಿಕಾರಿಗಳು, ಯೋಜನೆಯ ಕಾಮಗಾರಿ ನಡೆಸುತ್ತಿರುವ ಹೈದರಾಬಾದಿನ ಮೆಘಾ ಇಂಜಿನಿಯರಿಂಗ್ ಸಂಸ್ಥೆಯ ಎಂಜಿನಿಯರ್ ಗಳ ಬಳಿ ಮಾಹಿತಿ ತಿಳಿದುಕೊಂಡರು. ಯೋಜನೆಯ ಪ್ರಗತಿ ಕುರಿತು ಸಮಗ್ರವಾದ ವಿವರಗಳನ್ನು ಪಡೆದರು.


Spread the love

LEAVE A REPLY

Please enter your comment!
Please enter your name here