ಬೆಂಗಳೂರು:-ಪಿಇಎಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಹಾಗೂ ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ ವಿಧಿವಶರಾಗಿದ್ದಾರೆ.
Advertisement
ಬೆಂಗಳೂರಿನ ಗವಿಪುರ ಗುಟ್ಟಹಳ್ಳಿಯಲ್ಲಿ ಐದು ದಶಕಗಳ ಹಿಂದೆ ತಾತ್ಕಾಲಿಕ ಕಟ್ಟಡವೊಂದರಲ್ಲಿ ಕೇವಲ 45 ವಿದ್ಯಾರ್ಥಿಗಳೊಂದಿಗೆ ಪಿಯು ಕಾಲೇಜು ಆರಂಭಿಸಿದ ದೂರದೃಷ್ಟಿಯ ದೊರೆಸ್ವಾಮಿಯವರು ಪೀಪಲ್ಸ್ ಎಜುಕೇಷನ್ ಸೊಸೈಟಿ ಎಂಬ ಬ್ರ್ಯಾಂಡ್ ಕಟ್ಟಿ, ಇಂಜಿನಿಯರಿಂಗ್, ಮೆಡಿಕಲ್, ಹೊಸ ವಿಶ್ವವಿದ್ಯಾಲಯ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಆಂಧ್ರಪ್ರದೇಶ ಮೂಲದವರಾದ ದೊರೆಸ್ವಾಮಿ ಅವರು, ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಪಡೆದು, ಇಲ್ಲಿಯೇ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದ್ದರು. ನಂತರ ಖಾಸಗಿ ಕಾಲೇಜು ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ, ಅಲ್ಲಿಂದ ಹೊರಬಂದು ಪಿಇಎಸ್ ಶಿಕ್ಷಣ ಸಂಸ್ಥೆ ಆರಂಭಿಸಿದರು.