ಅವಹೇಳನಕಾರಿ ಹೇಳಿಕೆ ಕ್ರಮಕ್ಕೆ ಆಗ್ರಹಿಸಿ ಮನವಿ

0
Petition demanding action for derogatory statement by Congress leader
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗೌರವಾನ್ವಿತ ಪ್ರಧಾನಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದಲ್ಲಿ ಕೂಡಲೇ ರಾಷ್ಟçಪತಿ ಆಡಳಿತ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿ ಗದಗ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

Advertisement

ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ವಿರುದ್ಧ ಮುಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ರಾಷ್ಟç ವಿರೋಧಿ ಹಾಗು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶದಿಂದ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ರಾಜ್ಯಾದ್ಯಂತ ಸಚಿವರು, ಕಾಂಗ್ರೇಸ್ ಶಾಸಕರ ಮುಂದಾಳತ್ವದಲ್ಲಿ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಹಾಗು ಪ್ರಧಾನಮಂತ್ರಿಗಳ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವದು ಖೇದಕರವಾಗಿದೆ. ಸಾಂವಿದಾನಿಕ ಸಂಸ್ಥೆ, ವ್ಯಕ್ತಿಗಳ ವಿರುದ್ಧ ಅಪಪ್ರಚಾರ ಮತ್ತು ಕಾನೂನು ಸುವ್ಯವಸ್ಥೆ ವಿಫಲಗೊಳಿಸುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಈ ರೀತಿ ರಾಷ್ಟç ವಿರೋಧಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿ.ಪ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಸ್ಭೆರಿದಂತೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here