ಸಿಎಂ ಸಲ್ಲಿಸಿದ್ದ ಅರ್ಜಿ ವಜಾ: ಸತ್ಯಕ್ಕೆ ಜಯ ಸಿಕ್ಕಿದೆ – ಸ್ನೇಹಮಯಿ ಕೃಷ್ಣ

0
Spread the love

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯಕ್ಕೆ ಜಯ ಸಿಕ್ಕಿದೆ ಎಂದಿದ್ದಾರೆ.

Advertisement

ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ತಿರಸ್ಕರಿಸಿದೆ. ರಾಜ್ಯಪಾಲರು ಕಾನೂನು ಬದ್ಧವಾಗಿ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್​ ಎತ್ತಿಹಿಡಿದಿದೆ. ರಾಜ್ಯಪಾಲರ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿದೆ. ಹೈಕೋರ್ಟ್ ತೀರ್ಪನ್ನು ಸ್ವಾಗತ ಮಾಡುತ್ತೇವೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.


Spread the love

LEAVE A REPLY

Please enter your comment!
Please enter your name here