ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿದ್ಯಾರ್ಥಿ ಪ್ರದೀಪ ಹಿರೇಮಠ ಸ್ವಾಮಿ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹಾಗೂ ಸ್ವಾಮಿ ಜಗನ್ನಾಥಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಿಂದ ಗಣಿತ ಶಾಸ್ತ್ರದಲ್ಲಿ ಪಿ.ಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಸ್ಪೂರ್ತಿಗೊಂಡು ಶೈಕ್ಷಣಿಕ ಹಂತದಲ್ಲಿ ಹಲವಾರು ಸವಾಲುಗಳನ್ನು ಮೆಟ್ಟಿ ನಿಂತು ಯಶಸ್ಸನ್ನು ಕಂಡಿದ್ದಾರೆ.
ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದ ಗಣಿತ ವಿಭಾಗದ ಪ್ರಾಧ್ಯಾಪಕ ಡಾ. ಭಾರತಿ ಶೆಟ್ಟರ್ ಹಾಗೂ ಡಾ. ರಮೇಶ ಜಿ.ಕೆ ಅವರ ಮಾರ್ಗದರ್ಶನದಲ್ಲಿ ‘ಕಾಂಪಿಟೇಷನಲ್ ಸ್ಟಡಿ ಆನ್ ಹೀಟ್ ಟ್ರಾನ್ಸ್‌ಫರ್ ಇನ್ ಮ್ಯಾಗ್ನಟೈಸ್ಡ್ ಫ್ಲುಯಿಡ್ ಫ್ಲೋ’ ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ ಪಡೆದಿದ್ದಾರೆ.
ಪ್ರದೀಪ ಹಿರೇಮಠರನ್ನು ರಾಮಕೃಷ್ಣ ವಿವೇಕಾನಂದ ಆಶ್ರಮದ ಸಮಸ್ತ ಭಕ್ತರ ಪರವಾಗಿ ಹಾಗೂ ಸ್ವಾಮಿ ವಿವೇಕಾನಂದರ ಅಧ್ಯಯನ ಕೇಂದ್ರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.



