ಕುಂಭಮೇಳದಲ್ಲಿ ಪ್ರಕಾಶ್ ರೈ ಸ್ನಾನ ಮಾಡುತ್ತಿರುವ ಫೋಟೋ ವೈರಲ್: ಠಾಣೆ ಮೆಟ್ಟಿಲೇರಿದ ನಟ!

0
Spread the love

ಮೈಸೂರು:- AI ತಂತ್ರಜ್ಞಾನದ ಮೂಲಕ ಬಹುಭಾಷಾ ನಟ ಪ್ರಕಾಶ್ ರೈ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಫೋಟೋ ವೈರಲ್ ಮಾಡಿದ ಆರೋಪದಡಿ ಪ್ರಶಾಂತ್ ಸಂಬರಗಿ ವಿರುದ್ಧ ನಟ ಪ್ರಕಾಶ್ ರಾಜ್ ಕೇಸ್ ದಾಖಲಿಸಿದ್ದಾರೆ.

Advertisement

ಪ್ರಕಾಶ್ ರಾಜ್ ಅವರು ಎಡಪಂಕ್ತೀಯ ಚಿಂತನೆಗಳಿಂದ ಪ್ರಭಾವಿತರಾದವರು. ಅವರು ಬಿಜೆಪಿ ನಿರ್ಧಾರಗಳನ್ನು ಸಾಕಷ್ಟು ಟೀಕೆ ಮಾಡುತ್ತಾ ಇರುತ್ತಾರೆ. ಈಗ ಅವರು ಕುಂಭ ಮೇಳದಲ್ಲಿ ಭಾಗಿ ಆಗಿ ಪವಿತ್ರ ಸ್ನಾನ ಮಾಡುತ್ತಿರುವ ರೀತಿಯಲ್ಲಿ ಎಐ ಫೋಟೋ ಮಾಡಲಾಗಿತ್ತು. ಪೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು ನೀಡಿದ್ದಾರೆ.

ಈ ಫೋಟೋ ನಿಜ ಎಂದು ನಂಬಿಸುವ ಕೆಲಸ ಕೆಲವರಿಂದ ಆಗಿದೆ. ಇಲ್ಲದ್ದನ್ನು ಇರುವ ರೀತಿಯಲ್ಲಿ ತೋರಿಸುತ್ತಿರುವ ಬಗ್ಗೆ ಪ್ರಕಾಶ್ ರೈಗೆ ಅಸಮಾಧಾನ ಇದೆ. ಹೀಗಾಗಿ, ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಆಗಮಿಸಿ ದೂರು ಕೊಟ್ಟಿದ್ದಾರೆ. ‘ತಮ್ಮ ಪೋಟೋವನ್ನು ಎಐ ತಂತ್ರಜ್ಞಾನ ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಪ್ರಕಾಶ್ ರೈ ದೂರಿನಲ್ಲಿ ಕೋರಿದ್ದಾರೆ.


Spread the love

LEAVE A REPLY

Please enter your comment!
Please enter your name here