Hubballi Case: ಬಾಲಕಿಯನ್ನು ಕೊಂದ ಹಂತಕನ ಫೋಟೋ ರಿಲೀಸ್!

0
Spread the love

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಂಡು ಕೇಳರಿಯದ ಘೋರ ದುರಂತ ನಡೆದಿದ್ದು, ಇಡೀ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ. 5 ವರ್ಷದ ಬಾಲಕಿ ಮೇಲೆ ಅ*ತ್ಯಾಚಾರದ ಯತ್ನ ನಡೆಸಿ ಕೊಲೆ ಮಾಡಿರೋ ಪ್ರಕರಣಕ್ಕೆ ಹುಬ್ಬಳ್ಳಿ ಕೆರಳಿ ಕೆಂಡವಾಗಿದೆ. ಇದೀಗ ಎನ್‌ಕೌಂಟರ್​ನಲ್ಲಿ ಮೃತಪಟ್ಟ ಹಂತಕ ರಿತೇಶಕುಮಾರ ಪೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ.

Advertisement

ಹುಬ್ಬಳ್ಳಿಯ ಕೆಎಂಸಿಆರ್​​ಐ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿರುವ ರಿತೇಶಕುಮಾರ ಶವವನ್ನು ಗುರುತಿಸಲು ಆತನ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಂದಿಲ್ಲ. ಹೀಗಾಗಿ, ಪೊಲೀಸರು ಪೋಟೋ ಸಹಿತ ಪ್ರಕಟಣೆ ಹೊರಡಿಸಿದ್ದಾರೆ.

ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ. ಅಲ್ಲದೇ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ‘ಓಂ ನಮಃ ಶಿವಾಯ ಜಯ ಸಂಜಯ’ ಎಂಬ ಟ್ಯಾಟು ಗುರುತು ಸಹ ಇದೆ. ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ.

 


Spread the love

LEAVE A REPLY

Please enter your comment!
Please enter your name here