ಹೋರಾಟಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿ : ದಿವ್ಯ ಪ್ರಭು

0
Photographic exhibition of monuments
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯಲ್ಲಿ ನಮ್ಮ ರಾಷ್ಟ್ರದ ಐತಿಹಾಸಿಕ ಹೋರಾಟ ಮತ್ತು ಸಾಧನೆಗಳ ಬಗ್ಗೆ ಮಕ್ಕಳಲ್ಲಿ ಅರಿವು, ಹೆಮ್ಮೆ ಮೂಡಿಸುವುದು ನಮ್ಮ ಜವಾಬ್ದಾರಿಯಾಗಿದೆ.

Advertisement

ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸ್ಮಾರಕಗಳ ಛಾಯಾಚಿತ್ರ ಪ್ರದರ್ಶನವೂ ಅದರಲ್ಲಿ ಒಂದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಅವರು ಮಂಗಳವಾರ ಬೆಳಿಗ್ಗೆ ನಗರದ ಆರ್ಟ್ ಗ್ಯಾಲರಿಯಲ್ಲಿ ಕೇಂದ್ರ ಪುರಾತತ್ವ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿರುವ ಉತ್ತರ ಕರ್ನಾಟಕ ವಾಸ್ತುಶಿಲ್ಪ ಪರಂಪರೆ ಹಾಗೂ ಸ್ಮಾರಕಗಳು ಅಂದು-ಇಂದು ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯದ ಬಗ್ಗೆ ಅಭಿಮಾನ, ಹೆಮ್ಮೆ ಬರುವಂತೆ ಮಕ್ಕಳನ್ನು ಬೆಳೆಸಬೇಕು. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲಾಡಳಿತದಿಂದ ವಿಭಿನ್ನವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ನಮ್ಮ ಪರಂಪರೆ, ಸಂಸ್ಕೃತಿಗಳ ಅರಿವು ಇದ್ದಾಗ ಮಾತ್ರ ಮಕ್ಕಳಲ್ಲಿ ದೇಶ ಪ್ರೇಮ ಬೆಳೆಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣ ಧಾರವಾಡ ವಲಯ ಅಧೀಕ್ಷಕ ಪುರಾತತ್ವ ಅಧಿಕಾರಿ ಡಾ.ರೇಷ್ಮಾ ಸಾವಂತ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಅಧೀಕ್ಷಕ ಪುರಾತತ್ವ ಅಧಿಕಾರಿ ಡಾ. ದೇವರಾಜು ಸಾರಂಗಮಠ ಕಾರ್ಯಕ್ರಮ ನಿರೂಪಿಸಿದರು. ಉಪ ಅಧೀಕ್ಷಕ ಪುರಾತತ್ವ ಅಧಿಕಾರಿ ಶ್ರೀಗುರು ಬಾಗಿ ವಂದಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸುಧಾರಣೆ ಇಲಾಖೆ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಸವರಾಜ ಕುರಿಯವರ, ಉಪನ್ಯಾಸಕರಾದ ಎಸ್.ಕೆ. ಪತ್ತಾರ, ಶ್ರೀದೇವಿ ಲದ್ದಿಮಠ, ಡಾ.ಗಾಯತ್ರಿ ಜೋಶಿ, ಶಿಕ್ಷಕರಾದ ಎಂ.ಜಿ. ಹಿರೇಮಠ, ಅರ್ಜುನ ಲಮಾಣಿ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here