ಛಾಯಾಚಿತ್ರ ಪ್ರದರ್ಶನ, ತರಬೇತಿ ಕಾರ್ಯಾಗಾರ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಪ್ರಪ್ರಥಮ ಬಾರಿಗೆ ಛಾಯಾಚಿತ್ರ ಪ್ರದರ್ಶನ ಹಾಗೂ ಪತ್ರಿಕಾ ಛಾಯಾಗ್ರಾಹಣ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿತ್ತು.

Advertisement

ಛಾಯಾಚಿತ್ರ ಪ್ರದರ್ಶನಕ್ಕೆ ರಾಜ್ಯದ ಒಟ್ಟು 125 ಪತ್ರಿಕಾ ಛಾಯಾಚಿತ್ರಗಾರರಿಂದ ಛಾಯಾಚಿತ್ರ ಕಳಿಸಲಾಗಿತ್ತು. ಅದರಲ್ಲಿ ಕೇವಲ 50 ಛಾಯಾಚಿತ್ರಗಳನ್ನು ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು. ಗದುಗಿನ ಪತ್ರಿಕಾ ಛಾಯಾಗ್ರಾಹಕ ಶಂಕರ ಗುರಿಕಾರ ಅವರ ಛಾಯಾಚಿತ್ರ ಪ್ರದರ್ಶನಗೊಂಡಿದ್ದು, ವಿಧಾನಸಭಾ ಸಭಾಪತಿ ಬಸವರಾಜ ಹೊರಟ್ಟಿ ಛಾಯಾಚಿತ್ರ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಚನೇಶ ಹೂಗಾರ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here