ಜೈಪುರ:- ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದು 7 ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಎಂಬಲ್ಲಿ ಜರುಗಿದೆ.
Advertisement
ಪಿಕಪ್ ವ್ಯಾನ್‌ನಲ್ಲಿ ಖತುಶ್ಯಾಮ್ಜಿ ದೇವಸ್ಥಾನದ ದರ್ಶನ ಪಡೆದು ಭಕ್ತರು ಹಿಂತಿರುಗುತ್ತಿದ್ದರು. ಈ ವೇಳೆ ನಿಲ್ಲಿಸಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಏಳು ಮಕ್ಕಳು ಹಾಗೂ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 15ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ 9 ಜನರನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.