ಬೆಂಗಳೂರು: ಕಳೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಜೆಡಿಎಸ್‌ನ ಉಚ್ಚಾಟಿತ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿ, ಅವರ ವಿಡಿಯೋಗಳನ್ನು ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕವಾಗಿ ಸುಳ್ಳು ಹರಡಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Advertisement
ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ 25 ಸಾವಿರ ರೂ. ದಂಡ ವಿಧಿಸಿದೆ. ರಾಹುಲ್ ಭಾಷಣದ ಅರ್ಹತೆಯ ಬಗ್ಗೆ ನಾವು ಹೇಳುತ್ತಿಲ್ಲ. ಆದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಅಡಿಯಲ್ಲಿ ಇದು ವಿಷಯವಾಗಿರಬಾರದು ಎಂದು ಕೋರ್ಟ್ ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.