ಗೋಲ್ಡನ್ ಸ್ಟಾರ್ ಗಣೇಶ್ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಪಿನಾಕ ಚಿತ್ರದ ಪೋಸ್ಟರ್ ಮಹಾಶಿವರಾತ್ರಿ ದಿನದಂದು ಬಿಡುಗಡೆ ಆಗಿದೆ. ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಚಿತ್ರತಂಡ ರಾಜ್ಯದ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. . ಪೋಸ್ಟರ್‌ನಲ್ಲಿ ಗಣೇಶ್ ತ್ರಿಶೂಲ ಹಿಡಿದು ನಿಂತಿದ್ದಾರೆ.
ಪ್ರತಿಷ್ಟಿತ ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ಟಿ.ಜಿ.ವಿಶ್ವ ಅವರು ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕರಾಗಿ ಜನಪ್ರಿಯರಾಗಿರುವ ಬಿ.ಧನಂಜಯ್ ಚೊಚ್ಚಲ ನಿರ್ದೇಶನದ ಪಿನಾಕ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ʼಪಿನಾಕʼ ಎಂದರೆ ಶಿವನ ತ್ರಿಶೂಲ. ಈ ಚಿತ್ರದ ಶೀರ್ಷಿಕೆಯೂ ಹೌದು. ಗಣೇಶ್ ಅವರು ಸಹ ಈ ಚಿತ್ರದಲ್ಲಿ ಕ್ಷುದ್ರ ಹಾಗೂ ರುದ್ರ ಎಂಬ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಟೀಸರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಕ್ಷುದ್ರ ಮತ್ತು ರುದ್ರನ ಅವತಾರದಲ್ಲಿ ಗಣೇಶ್ ಈವರೆಗೂ ಯಾವ ಚಿತ್ರದಲ್ಲೂ ಕಾಣಿಸದ ಪಾತ್ರದಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈಗಾಗಲೇ ತೆಲುಗು, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ 48 ಚಿತ್ರಗಳನ್ನು ನಿರ್ಮಿಸಿರುವ ಟಿ.ಜಿ. ವಿಶ್ವಪ್ರಸಾದ್ ಸಾರಥ್ಯದ ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣ ಮಾಡುತ್ತಿರುವ 49ನೇ ಚಿತ್ರವಿದು. ನೃತ್ಯ ನಿರ್ದೇಶಕನಾಗಿ ಜನಪ್ರಿಯರಾಗಿರುವ ಧನಂಜಯ ಮೊದಲ ಬಾರಿಗೆ ʼಪಿನಾಕʼ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದುವರೆಗೂ ಕಾಣಿಸಿಕೊಳ್ಳದ ಲುಕ್ ನಲ್ಲಿ ಗಣೇಶ್ ಕಾಣಿಸಿಕೊಳ್ತಿದ್ದಾರೆ.