ನಕಲಿ ನೋಟ್ ಮುದ್ರಿಸಿ RBIಗೆ ವಂಚಿಸುವ ಪ್ಲ್ಯಾನ್: ಐದು ಮಂದಿ ಅರೆಸ್ಟ್!

0
Spread the love

ಬೆಂಗಳೂರು:- ಆರ್‌ಬಿಐಗೆ ನಕಲಿ ನೋಟು ನೀಡಿ ವಂಚಿಸಲು ಯತ್ನಿಸಿದ ಗ್ಯಾಂಗ್ ಅನ್ನು ಪೊಲೀಸರು ಎಡೆಮುರಿಕಟ್ಟಿದ್ದಾರೆ.

Advertisement

ಅಬ್ದುಲ್, ಪ್ರಸೀತ್, ಮೊಹಮ್ಮದ್ ಅಫ್ನಾಸ್, ನೂರುದ್ದೀನ್ ಅನ್ವರ್ ಹಾಗೂ ಪ್ರಿಯೇಶ್ ಬಂಧಿತರು.

ಆರೋಪಿಗಳು ಹಿಂದಿಯ ವೆಬ್ ಸೀರಿಸ್ ಒಂದರಲ್ಲಿ ನೋಟುಗಳನ್ನ ಮುದ್ರಿಸಿ ವಾಮಮಾರ್ಗದಲ್ಲಿ ಸರಬರಾಜು ಮಾಡುವ ಕತೆಯನ್ನು ಮೀರಿಸುವ ಹಾಗೆ ನಕಲಿ ನೋಟುಗಳನ್ನು ಮುದ್ರಿಸಿ ವಂಚಿಸುತ್ತಿದ್ದರು.‌ ಅಲ್ಲದೇ ನಕಲಿ ನೋಟುಗಳನ್ನು ಆರ್‌ಬಿಐಗೆ ನೀಡಿ ರಾಜಾರೋಷವಾಗಿ ಚಾಲ್ತಿಗೆ ತರಲು ಪ್ರಯತ್ನಿಸಿದ್ದರು.

ಇದರಲ್ಲಿ ಸಿರಗುಪ್ಪ ಮೂಲದ ಅಬ್ದುಲ್ ಉದ್ಯಮಿ ಆಗಿದ್ದು, ಪ್ರಸೀತ್ ಅಲಿಯಾಸ್ ಪ್ರಸಿದ್‌ಗೆ 40 ಲಕ್ಷ ರೂ. ಮೌಲ್ಯದ ಗ್ರಾನೈಟ್ ಮಾರಾಟ ಮಾಡಿದ್ದ. ಪದೇ ಪದೇ ಹಣ ಕೇಳುತ್ತಿದ್ದ. ಅಬ್ದುಲ್‌ಗೆ ನನ್ನ ಹತ್ರ‌ 2000 ರೂ. ಮುಖಬೆಲೆಯ 25 ಲಕ್ಷ ರೂ. ಹಣ ಇದೆ, ಅದನ್ನು ಆರ್‌ಬಿಐನಲ್ಲಿ ಎಕ್ಸ್‌ಚೇಂಜ್ ಮಾಡಿಸಿಕೋ ಎಂದು ಪ್ರಸಿದ್ದ್ 25 ಲಕ್ಷ ರೂ. ನಕಲಿ ನೋಟ್‌ ಕೊಟ್ಟಿದ್ದನಂತೆ.

ಈ ಹಣವನ್ನ ಬೆಂಗಳೂರಿನ ಆರ್‌ಬಿಐಗೆ ತಂದ ಅಬ್ದುಲ್, ಅಲ್ಲಿ ಮೆಷಿನ್‌ನಲ್ಲಿ ಹಾಕಿದಾಗ ಹಣ ಚಲಾವಣೆ ಆಗಿರಲಿಲ್ಲ. ಈ ವೇಳೆ ಅಬ್ದುಲ್‌ಗೆ ನೋಟಿನ ಬಗ್ಗೆ ಅನುಮಾನ ಬಂದಿದ್ದರೂ ಕೂಡ, ನೇರವಾಗಿ ಅಧಿಕಾರಿಗಳ ಬಳಿ ಹೋಗಿ ನೋಟು ಎಕ್ಸ್ ಚೇಂಜ್ ಮಾಡಲು ಕೇಳಿದ್ದಾನೆ. ಈ ವೇಳೆ ನೋಟು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳು ಎಂಬುದು ಬೆಳಕಿಗೆ ಬಂದಿದೆ.

ಆರ್‌ಬಿಐ ಅಧಿಕಾರಿಗಳು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಕಲಿ ನೋಟಿನ ಮೂಲ ಬೆನ್ನತ್ತಿ ವಿಚಾರಣೆ ನಡೆಸಿದಾಗ ಕೇರಳದ ಕಾಸರಗೋಡು ಲಿಂಕ್ ಸಿಕ್ಕಿದ್ದು, ಅಲ್ಲಿನ ಪ್ರಿಯೇಶ್, ಮೊಹಮ್ಮದ್ ಅಫ್ನಾಸ್ ಹಾಗೂ ನೂರುದ್ದೀನ್ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ಪ್ರಿಯೇಶ್ ಪ್ರಿಂಟಿಂಗ್ ಪ್ರೆಸ್ ಹೊಂದಿದ್ದು, ಅದರಲ್ಲಿ ಎರಡು ಸಾವಿರ ಮುಖಬೆಲೆ ಖೋಟಾ ನೋಟು ಮುದ್ರಿಸಿ ಹಂಚಿಕೆ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ.


Spread the love

LEAVE A REPLY

Please enter your comment!
Please enter your name here