ಅಹಮದಾಬಾದ್ ಏರ್ ಪೋರ್ಟ್’ನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

0
Spread the love

ಅಹ್ಮದಾಬಾದ್: ಗುಜರಾತ್ ರಾಜ್ಯದ ಅಹಮದಾಬಾದ್‌ನ ಮೇಘಾನಿ ನಗರದಲ್ಲಿ ಏರ್ ಇಂಡಿಯಾ ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ಇಂದು ಮಧ್ಯಾಹ್ನ ವಿಮಾನ ಅಪಘಾತಕ್ಕೀಡಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಭೀತಿ ಮೂಡಿಸಿದೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.
ವಿಮಾನದಲ್ಲಿ ಸಿಬ್ಬಂದಿ ಮತ್ತು ಪ್ರಯಾಣಿಕರು ಸೇರಿದಂತೆ 242 ಜನರಿದ್ದರು. ಮಧ್ಯಾಹ್ನ 1:50 ಸುಮಾರಿಗೆ ಅಹಮದಾಬಾದ್ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್ನಿಂದ ಲಂಡನ್ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ.
ಟೇಕಾಫ್ಆದ 2 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ. ಘಟನಾ ಸ್ಥಳಕ್ಕೆ 7 ಅಗ್ನಿ ಶಾಮಕ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ. ವಿಮಾನ ಜನವಸತಿ ಕಟ್ಟಡದ ಮೇಲೆ ಬಿದ್ದಿದೆ. ಹೀಗಾಗಿ ಸಾವು ನೋವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆಯಿದೆ.

Advertisement

Spread the love

LEAVE A REPLY

Please enter your comment!
Please enter your name here