HomeIndia Newsವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ, ತನಿಖೆಗೆ ಸಮಿತಿ ರಚನೆ

ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ, ತನಿಖೆಗೆ ಸಮಿತಿ ರಚನೆ

For Dai;y Updates Join Our whatsapp Group

Spread the love

ಅಹಮದಾಬಾದ್: ಅಹಮದಾಬಾದ್ ನಲ್ಲಿ ಸಂಭವಿಸಿದೆ ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ.

ಗುರುವಾರ ಮಧ್ಯಾಹ್ನ ಅಹಮದಾಬಾದ್​​ನಿಂದ ಲಂಡನ್​ನ ಗ್ಯಾಟ್ವಿಕ್​​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಾನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿ ಘನಘೋರ ದುರಂತ ಸಂಭವಿಸಿತ್ತು. ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದರು.

ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸೇರಿದ್ದಾರೆ. ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ತ್ವರಿತಗತಿಯಲ್ಲಿ ಸಾಗುತ್ತಿದೆ. ತನಿಖೆಯಲ್ಲಿ ಮಹತ್ವದ ಪಾತ್ರವಹಿಸಲಿರುವ ನಿರ್ಣಾಯಕ ಸಾಧನವಾಗಿದ್ದ ಒಂದು ಬ್ಲ್ಯಾಕ್ ಬಾಕ್ಸ್​​ ಅನ್ನು ಗುರುವಾರ ರಾತ್ರಿ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ ಬ್ಲ್ಯಾಕ್ ಬಾಕ್ಸ್​​ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್​​ಗಾಗಿ (ಡಿವಿಆರ್) ಶೋಧ ಕಾರ್ಯ ಮುಂದುವರೆದಿದ್ದು, ಇವುಗಳು ಪ್ರಮುಖ ಸುಳಿವುಗಳನ್ನು ನೀಡಲಿವೆ.

ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದನ್ನು ಪತ್ತೆಹಚ್ಚುವುದಕ್ಕಾಗಿ ನಾಗರಿಕ ವಿಮಾನಯಾನ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಏರ್ ಇಂಡಿಯಾ ವಿಮಾನ AI-171 ಅಪಘಾತದ ಕಾರಣಗಳನ್ನು ಪತ್ತೆ ಮಾಡುವುದಷ್ಟೇ ಅಲ್ಲದೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ಎದುರಿಸಲು ಅಸ್ತಿತ್ವದಲ್ಲಿರುವ ಎಸ್​​ಒಪಿಗಳಲ್ಲಿ ಮಾಡಬೇಕಾದ ಬದಲಾವಣೆಗಳು ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಸೂಚಿಸಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!