ಬೆಂಗಳೂರು: ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಇನ್ನೂ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮೇಘಾನಿ ಪ್ರದೇಶ ಮೆಡಿಕಲ್ ಕಾಲೇಜ್‌ವೊಂದರ ಮೇಲೆ ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಈ ಸುದ್ದಿ ತಿಳಿದು ತುಂಬಾ ಆಘಾತವಾಗಿದೆ.
ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ, ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಬೇಸರ ವ್ಯಕ್ತಪಡಿಸಿದರು.
ಹಮ್ಮದಾಬಾದ್‌ನಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಎ171 ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಪೈಲೆಟ್ಸ್, ಕ್ಯಾಬಿನ್ ಕ್ರೂ ಹಾಗೂ ಪ್ರಯಾಣಿಕರ ಸೇರಿದಂತೆ 242 ಮಂದಿಯನ್ನು ಹೊತ್ತು ಲಂಡನ್‌ಗೆ ಪ್ರಯಾಣ ಬೆಳೆಸಿದ ಏರ್ ಇಂಡಿಯಾ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
ಆರಂಭದಲ್ಲಿ 30 ಮಂದಿ ಸಾವು ಅನ್ನೋ ಮಾಹಿತಿ ಹೊರಬಿದ್ದಿತ್ತು. ಇದೀಗ ಸಾವಿನ ಸಂಖ್ಯೆ 110ಕ್ಕೆ ಏರಿಕೆಯಾಗಿದೆ. ಈ ಪೈಕಿ 132 ಮಂದಿ ಆಸ್ಪತ್ರೆ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲಗಳ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.