ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ, ಬಳಿಕ ಹೆಲಿಕಾಪ್ಟರ್ ಮೂಲಕ ಜಿಗಣಿಯ ಪ್ರಶಾಂತಿ ಕುಟಿರಕ್ಕೆ ತೆರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್ ಕೂಡ ಉಪಸ್ಥಿತರಿದ್ದರು.
ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು 15,600 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರ ಜೊತೆಗೆ, ತಾವರೆಕೆರೆಯಿಂದ ಐಐಎಂ ಬೆಂಗಳೂರು ಮೆಟ್ರೋ ನಿಲ್ದಾಣದವರೆಗಿನ ಪಿಂಕ್ ಮೆಟ್ರೋ ಮಾರ್ಗದ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.
ವಿಶೇಷವೆಂದರೆ, ಪ್ರಧಾನಿ ಮೋದಿ ಅವರು ಸ್ವತಃ ಮೆಟ್ರೋದಲ್ಲಿ ಪ್ರಯಾಣಿಸಲಿದ್ದು, ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭಾರೀ ಕುತೂಹಲ ಮೂಡಿದೆ.









