ನವದೆಹಲಿ: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನೂ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು,
ಎಸ್.ಎಲ್. ಭೈರಪ್ಪ ಅವರ ನಿಧನದಿಂದ ಬೇಸರವಾಗಿದೆ. ನಮ್ಮ ಆತ್ಮಸಾಕ್ಷಿಯನ್ನು ಕಲಕಿ, ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಭೈರಪ್ಪ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಆಳವಾಗಿ ಶ್ರೀಮಂತಗೊಳಿಸಿದರು. ಅವರ ಬರಹಗಳು ಪೀಳಿಗೆಗಳನ್ನು ಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು ಅದರೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.



