HomePolitics Newsಪ್ರಧಾನಿ ಮೋದಿಗೆ 13 ಕೆಜಿ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನ: ಕರ್ನಾಟಕದ ಸಿಎಂ ಬಗ್ಗೆ ವ್ಯಂಗ್ಯವಾಡಿದ...

ಪ್ರಧಾನಿ ಮೋದಿಗೆ 13 ಕೆಜಿ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನ: ಕರ್ನಾಟಕದ ಸಿಎಂ ಬಗ್ಗೆ ವ್ಯಂಗ್ಯವಾಡಿದ ‘ನಮೋ’!

For Dai;y Updates Join Our whatsapp Group

Spread the love

ಬೆಂಗಳೂರು: ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಆಗಮಿಸಿದರು.

ಬೆಂಗಳೂರಿನ ಎಚ್‌ಎಎಲ್ ಆವರಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರಿಂದ ಪ್ರಧಾನಿಗೆ ಅದ್ಧೂರಿ ಸನ್ಮಾನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ 13 ಕೆಜಿ ತೂಕದ ಬೆಳ್ಳಿಯ ಪ್ರತಿಮೆ ನೀಡಿ ಗೌರವಿಸಲಾಯಿತು. ಈ ವೇಳೆ ಬಿಜೆಪಿ ನಾಯಕರಿಂದ ಜಯಭೇರಿ ಸಂಭ್ರಮವೂ ವ್ಯಕ್ತವಾಯಿತು.

ಈ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಚುನಾವಣಾ ಯಶಸ್ಸಿನ ಸಂಭ್ರಮ ಹಂಚಿಕೊಳ್ಳಲಾಗಿದ್ದು, ನಾಯಕರು ಒಟ್ಟಾಗಿ ಕೇಂದ್ರ ನಾಯಕತ್ವಕ್ಕೆ ಅಭಿನಂದನೆ ಸಲ್ಲಿಸಿದರು.  ಇದೇ ವೇಳೆ, ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದ ಮೋದಿ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್​​ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲ ಒಂದೊಂದು ಸಮಸ್ಯೆ ಇದ್ದೇ ಇರುತ್ತದೆ. ಹಿಮಾಚಲ ಪ್ರದೇಶದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವೇತನ ದೊರೆಯುತ್ತಿಲ್ಲ. ತೆಲಂಗಾಣದಲ್ಲಿ ರೈತರ ಆತ್ಮಹತ್ಯೆಗಳಾಗುತ್ತಿವೆ. ಕೇರಳದಲ್ಲಿ ಬಹುಮತದೊಂದಿಗೆ ಚುನಾವಣೆ ಗೆದ್ದರೂ ಇನ್ನೂ ಸಿಎಂ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇಲ್ಲಿ ಕರ್ನಾಟಕದಲ್ಲೂ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ಆಂತರಿಕ ಕಚ್ಚಾಟವನ್ನು ಮೋದಿ ಲೇವಡಿ ಮಾಡಿದರು.

ಕಾಂಗ್ರೆಸ್​ ಸರ್ಕಾರ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲ ಖಜಾನೆ ಲೂಟಿ ಹೊಡೆಯುತ್ತಿದ್ದಾರೆ. ಜನರು ಸಮಸ್ಯೆಗಳಿಂದ ಬಳಲುತ್ತಿದ್ದರೆ, ಸರ್ಕಾರದ ನಾಯಕರು ಮಾತ್ರ ಲೂಟಿ ಹೊಡೆದ ಹಣಕ್ಕಾಗಿ ಆಂತರಿಕ ಜಗಳ ಮತ್ತು ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದಾರೆ. ರಾಜಸ್ಥಾನದಲ್ಲಿ ಏನಾಯಿತು ಎಂಬುದು ನಿಮಗೆ ಗೊತ್ತಿದೆ, ಕರ್ನಾಟಕದಲ್ಲೂ ಅದೇ ಹಾದಿ ಮುಂದುವರಿಯುತ್ತಿದೆ ಎಂದು ಮೋದಿ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!