ಬೆಂಗಳೂರು: ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು. ಬಳಿಕ ಅವರು ರಾಗಿಗುಡ್ಡ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ ನಿಲ್ದಾಣವರೆಗೆ ಮೆಟ್ರೋ ಪ್ರಯಾಣ ಬೆಳೆಸಿದರು. ಪ್ರಯಾಣದ ವೇಳೆ ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
Advertisement
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ವಿ.ಸೋಮಣ್ಣ, ಸಂಸದರಾದ ಡಾ. ಮಂಜುನಾಥ್ ಮತ್ತು ತೇಜಸ್ವಿ ಸೂರ್ಯ ಸಹ ಪ್ರಧಾನಿಯೊಂದಿಗೆ ಪ್ರಯಾಣ ಮಾಡಿದರು.