ಬೆಳಗಾವಿ: ಕಂಡಕ್ಟರ್ ಮೇಲೆ ಬೇಕು ಅಂತಾನೇ ಪೋಕ್ಸೋ ಕೇಸ್ ಕೊಟ್ಟಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಾಳೇಕುಂದ್ರಿ ಬಳಿ ಮಧ್ಯಾಹ್ನ 1 ಗಂಟೆಗೆ ಘಟನೆ ನಡೆದಿದೆ. ಆಮೇಲೆ ನಮ್ಮ ಇಲಾಖೆಯವರು ದೂರು ಕೊಟ್ಟ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಅಲ್ಲದೇ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೂ ಅವರನ್ನು ಒಪ್ಪಿಸಿದ್ದಾರೆ. ಮಾರನೇ ದಿನ ಕಂಡಕ್ಟರ್ ಮೇಲೆ ಬೇಕು ಅಂತಾನೇ ಪೋಕ್ಸೋ ಕೇಸ್ ಕೊಟ್ಟಿದ್ದಾರೆ” ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ಭ್ರಷ್ಟರು, ಕೊಲೆಗಡುಕರಿಗೆ ರಕ್ಷಣೆ ಇದೆ ಎಂಬ ಸಿ.ಟಿ.ರವಿ ಆರೋಪಕ್ಕೆ “ಅಂತವರೆಲ್ಲಾ ಅವರ ಪಕ್ಷದಲ್ಲೆ ಇದ್ದಾರಲ್ಲ. ಭ್ರಷ್ಟರು, ಕೊಲೆಗಡುಕರು ಮತ್ತೊಬ್ಬರು ಎಲ್ಲಾ ಬಿಜೆಪಿ ಪಕ್ಷದಲ್ಲೆ ಇದ್ದಾರೆ. ಅವರಿಗೆ ಬೆಂಬಲಿಸುವುದು ಬಿಜೆಪಿಯವರು. ನಮ್ಮ ಪಕ್ಷದಲ್ಲಿ ಯಾರೂ ಅಂತವರಿಲ್ಲ. ನಮ್ಮಲ್ಲಿ ಸಚ್ಚಾರಿತ್ರ್ಯವುಳ್ಳವರಿದ್ದಾರೆ ಎಂದು ಕಿಡಿಕಾರಿದ್ದಾರೆ.