ಬಾಗಲಕೋಟೆ: ಬೆಳಗಾವಿ ಮೂಲದ ಜನಪ್ರಿಯ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಮೇಲೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 24ರಂದು ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಘಟನೆ ನಡೆದಿದ್ದು, ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದ ಮ್ಯೂಸಿಕ್ ಮೈಲಾರಿ, ಬಾಲಕಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾರೆಂದು ಬಾಲಕಿ ಆರೋಪಿಸಿದ್ದಾರೆ.
ಮ್ಯೂಸಿಕ್ ಮೈಲಾರಿ ಸೇರಿ ಏಳು ಮಂದಿ ಆರೋಪಿಗಳಾಗಿ ಇದ್ದಾರೆ. ಡಿಸೆಂಬರ್ 14ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮರುದಿನ ಮಹಾಲಿಂಗಪುರ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ.
ಮ್ಯೂಸಿಕ್ ಮೈಲಾರಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ. ವಿಶೇಷವಾಗಿ ‘ಬಾಗಲಕೋಟೆ ಬಸ್ ಸ್ಟ್ಯಾಂಡ್ನಾಗ’ ಹಾಡು ವೈರಲ್ ಆಗಿತ್ತು.



