ಪೋಕ್ಸೋ ಕೇಸ್: ಯಡಿಯೂರಪ್ಪಗೆ ಮತ್ತೆ ರಿಲೀಫ್ ನೀಡಿದ ಹೈಕೋರ್ಟ್

0
Spread the love

ಬೆಂಗಳೂರು:- ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ರಿಲೀಫ್ ಕೊಟ್ಟಿದೆ.

Advertisement

ತಮ್ಮ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣವನ್ನು ರದ್ದು ಕೋರಿ ಬಿಎ ಸ್ವೈ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೈಗೆತ್ತಿಕೊಂಡ ಹೈಕೋರ್ಟ್, ವಿಚಾರಣೆಯನ್ನು ಒಂದು ವಾರ ಮುಂದೂಡಿದೆ. ಅಲ್ಲದೇ ಈ ಹಿಂದೆ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದೆ. ಇದರೊಂದಿಗೆ ಯಡಿಯೂರಪ್ಪ ಮತ್ತೆ ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಮಾರ್ಚ್​ 3 ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ 2 ಬಾರಿ ನೋಟಿಸ್​ ನೀಡಿದ್ದರು. ಆದರೆ, ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಇದರಿಂದಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು


Spread the love

LEAVE A REPLY

Please enter your comment!
Please enter your name here