HomeCrime Newsಪ್ರಧಾನಿ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ!

ಪ್ರಧಾನಿ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ!

For Dai;y Updates Join Our whatsapp Group

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪದ ಮೇಲೆ ಯುವಕನನ್ನು ಬಾಣಸವಾಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನಗರದ ಹಡ್ಸನ್ ಎಂಬಾತನ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಧಾನಿ ಮೋದಿ ಅವರನ್ನು ನಿಂದಿಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪ ಎದುರಿಸುತ್ತಿದ್ದಾನೆ. ವಿಡಿಯೋ ವೈರಲ್ ಆದ ಬಳಿಕ ಪ್ರಕರಣ ಗಮನ ಸೆಳೆದಿತ್ತು.

ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಘಟಕ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವೈರಲ್ ವಿಡಿಯೋದ ಮೂಲ, ಉದ್ದೇಶ ಹಾಗೂ ಇತರರ ಪಾತ್ರವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆಯ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img