ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್ & ಗ್ಯಾಂಗ್ ಮೇಲೆ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಸಿದ್ಧಪಡಿಕೊಂಡಿದ್ದಾರೆ. ಕೋರ್ಟ್‌ಗೆ ಇಂದು ಚಾರ್ಜ್‌ಶೀಟ್ ಸಲ್ಲಿಸುವುದು ಅನುಮಾನ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ.
ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ’ ಎಂದಿದ್ದಾರೆ.
ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್ಎಸ್ಎಲ್ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್ನ ಎಫ್ಎಸ್ಎಲ್ನಿಂದ ಕೆಲವು ವರದಿಗಳು ಬರಬೇಕಿವೆ. ಆದರೆ ಅವರುಗಳ ಹೊರತಾಗಿಯೇ ನಾವು ವರದ ಸಲ್ಲಿಕೇ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸುತ್ತಿದ್ದೇವೆ’ ಎಂದಿದ್ದಾರೆ.