ಕಲಬುರಗಿ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಕಾನ್ಸ್ಟೇಬಲ್ಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಭೀಮಾನಾಯಕ್ ಶಿಕ್ಷೆಗೆ ಒಳಗಾದ ಪೊಲೀಸ್ ಕಾನ್ಸ್ಟೇಬಲ್.
ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೀಮಾನಾಯಕ್, 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭೀಮಾನಾಯಕ್ಗೆ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.










