ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಕಾರು ಹರಿದಿರುವ ಘಟನೆ ಜರುಗಿದೆ.
ಘಟನೆಯಲ್ಲಿ ಜ್ಞಾನಬಾಯಿ(45) ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಮೇಹಕರ್ ಪೊಲೀಸ್ ಠಾಣೆಯ ಪಿಸಿ ಉಮಾಕಾಂತ್ ಕಾರು ಮಹಿಳೆ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಜ್ಞಾನಬಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಭಾಲ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದ ಸಂಪೂರ್ಣ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.



